ಮಂಗಳೂರು, ಅ. 31 (DaijiworldNews/MB) : ದಕ್ಷಿಣ ಕನ್ನಡ ಜಿಲ್ಲೆಯ ಆರೋಗ್ಯ ಬುಲೆಟಿನ್ ಪ್ರಕಾರ ಜಿಲ್ಲೆಯಲ್ಲಿ ಶುಕ್ರವಾರ 137 ಹೊಸ ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 30,147 ಕ್ಕೆ ಏರಿದೆ. ಈ ಪೈಕಿ 1,830 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.

ಈವರೆಗೆ 2,58,554 ಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 2,28,407 ಮಾದರಿಗಳು ನೆಗೆಟಿವ್ ಆಗಿದೆ.
ಶುಕ್ರವಾರ 198 ಜನರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 27,641 ಕ್ಕೆ ತಲುಪಿದೆ. ಶುಕ್ರವಾರ ಮೂರು ಸೇರಿದಂತೆ ಈವರೆಗೆ ಒಟ್ಟು 676 ಸಾವುಗಳು ಸಂಭವಿಸಿವೆ.
ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ 45 ಹೊಸ ಪ್ರಕರಣಗಳು ದಾಖಲಾಗಿದ್ದು ಜಿಲ್ಲೆಯ ಒಟ್ಟು ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ 21,837 ಕ್ಕೆ ಏರಿದೆ. ಈ ಪೈಕಿ 818 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.
ಈವರೆಗೆ 1,81,356 ಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 1,59,519 ನೆಗೆಟಿವ್ ಆಗಿದೆ.
ಶುಕ್ರವಾರ 97 ರೋಗಿಗಳು ಗುಣಮುಖರಾಗಿದ್ದು ಈವರೆಗೆ ಒಟ್ಟು ಗುಣಮುಖರಾದವರ ಸಂಖ್ಯೆ 20,838 ಕ್ಕೆ ಏರಿದೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 182 ಸೋಂಕಿತರು ಸಾವನ್ನಪ್ಪಿದ್ದಾರೆ.