ಕಾಸರಗೋಡು, ನ.01 (DaijiworldNews/PY): ಚಾಲಕನ ನಿಯಂತ್ರಣ ತಪ್ಪಿದ ಕಾರು ಅಂಗಡಿಯೊಳಗೆ ನುಗ್ಗಿದ ಘಟನೆ ನ.1ರ ಭಾನುವಾರದಂದು ಮಧ್ಯಾಹ್ನ ಮಂಜೇಶ್ವರ ಸಮೀಪದ ಕುಂಜತ್ತೂರು ಪದವಿನಲ್ಲಿ ನಡೆದಿದ್ದು, ಅಪಾರ ಪ್ರಮಾಣದ ಹಾನಿ ಉಂಟಾಗಿದೆ.



ವಸ್ತ್ರದಂಗಡಿ ಮಾಲಕ ಅಪಾಯದಿಂದ ಪಾರಾಗಿದ್ದಾರೆ.
ಕುಂಜತ್ತೂರು ಪದವು ತಿರುವಿನಲ್ಲಿ ನಿಯಂತ್ರಣ ತಪ್ಪಿದ ಕಾರು ಅಂಗಡಿ ಮುಂಭಾಗದಲ್ಲಿ ನಿಲ್ಲಿಸಿದ್ದ ಬುಲೆಟ್ ಬೈಕ್ ಹಾಗೂ ವಿದ್ಯುತ್ ಕಂಬಕ್ಕೆ ಬಡಿದು ಅಂಗಡಿಗೆ ನುಗ್ಗಿದೆ.
ಮಂಜೇಶ್ವರ ಠಾಣಾ ಪೊಲೀಸರು ಸ್ಥಳಕ್ಕಾಮಿಸಿದ್ದು, ಕೇಸು ದಾಖಲಿಸಿಕೊಂಡಿದ್ದಾರೆ.