ಉಡುಪಿ, ನ. 01 (DaijiworldNews/SM): ಮಾದಕ ಜಾಲ ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡುತ್ತಿದೆ ಎಂಬುವುದು ಮಣಿಪಾಲದಲ್ಲಿ ಸಾಬೀತಾಗಿದೆ. ಗಾಂಜಾ ಸಹಿತ ಮಾದಕ ವಸ್ತುಗಳನ್ನು ಹೊಂದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೇರಿಕಾ ಮೂಲದ ಅನಿವಾಸಿ ವಿದ್ಯಾರ್ಥಿ ಹಾಗೂ ಮಣಿಪಾಲದ ಮೆಡಿಕಲ್ ವಿದ್ಯಾರ್ಥಿ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.


ಮಣಿಪಾಲದ ಅಪಾರ್ಟ್ ಮೆಂಟ್ ವೊಂದರಲ್ಲಿ ಅಕ್ರಮವಾಗಿ ವಿದೇಶಿ ಹೈಡ್ರೊವಿಡ್ ಗಾಂಜಾ, ಬ್ರೌನ್ ಶುಗರ್, ಎಂಡಿಎಂಎ ಮಾತ್ರೆಗಳನ್ನು ಹೊಂದಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೆಡಿಕಲ್ ಕಾಲೇಜಿನ ವೈದ್ಯ ವಿದ್ಯಾರ್ಥಿ ಆದಿತ್ಯ ಪ್ರಭು ಹಾಗೂ ಅಮೇರಿಕಾದ ಅನಿವಾಸಿ ವಿದ್ಯಾರ್ಥಿ ಅನಿಶ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ದಾಳಿ ವೇಳೆ ವಿದೇಶಿ ಹೈಡ್ರೊವಿಡ್ ಗಾಂಜಾ, ಬ್ರೌನ್ ಶುಗರ್, ಎಂಡಿಎಂಎ ಮಾತ್ರೆಗಳು ಪತ್ತೆಯಾಗಿದ್ದು, ಅವುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪೊಲೀಸರು ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 3,89,000 ರೂ. ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.