ಉಡುಪಿ, ನ. 01 (DaijiworldNews/SM): ವಿದ್ಯಾರ್ಥಿನಿ ರಕ್ಷಾ ನಾಯಕ್ ಅವರ ಅನುಮಾನಾಸ್ಪದ ಸಾವಿನ ಪ್ರಕರಣದ ಆರೋಪಿ ಪ್ರಶಾಂತ್ ಮೊಗವೀರನನ್ನು ಮೂರು ದಿನಗಳ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.

ಉಡುಪಿ ನಗರ ಪೊಲೀಸ್ ಠಾಣೆ ಸಿಬ್ಬಂದಿಗಳು, ಆರೋಪಿ ಪ್ರಶಾಂತ್ ಮೊಗವೀರನನ್ನು ಕಳೆದ ಒಂದು ವಾರದಿಂದ ವಿಚಾರಣೆ ನಡೆಸಿ ವಾಪಸ್ ಕಳುಹಿಸುತ್ತಿದ್ದರು. ಈ ನಡುವೆ ಆತನನ್ನು ಬಂಧಿಸಿ ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಕಸ್ಟಡಿಗೆ ನೀಡುವಂತೆ ಪೊಲೀಸರು ಮಾನ್ಯ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದ್ದರು.
ಇನ್ನು ಅಕ್ಟೋಬರ್ 24 ರಂದು ಪ್ರಜ್ಞಾಹೀನ ಸ್ಥಿತಿಯಲ್ಲಿ ರಕ್ಷಿತಾಳನ್ನು ಆರೋಪಿ ಪ್ರಶಾಂತ್ ಗಾಂಧಿ ಆಸ್ಪತ್ರೆಗೆ ಕರೆತಂದಿದ್ದರು. ಸ್ವಲ್ಪ ಸಮಯದ ನಂತರ ಆತ ಆಸ್ಪತ್ರೆಯಿಂದ ಕಣ್ಮರೆಯಾಗಿ ನಾಪತ್ತೆಯಾಗಿದ್ದ. ಇದಲ್ಲದೆ, ಆತ ತನ್ನ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿದ್ದ. ಈಗ ಒಂದು ವಾರದಿಂದ ನಿರಂತರವಾಗಿ ವಿಚಾರಣೆ ನಡೆಸಿದ ಪೊಲೀಸರು ಆತನನ್ನು ಮೂರು ದಿನಗಳ ಕಾಲ ವಶಕ್ಕೆ ತೆಗೆದುಕೊಂಡಿದ್ದಾರೆ.