ಕಾಸರಗೋಡು, ನ. 02 (DaijiworldNews/MB) : ಸುಳ್ಯ - ಕಾಸರಗೋಡು ರಾಜ್ಯ ಹೆದ್ದಾರಿಯ ಕೋಟೂರು ತಿರುವಿನಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಆಳದ ಕಂದಕಕ್ಕೆ ಉರುಳಿದ ಘಟನೆ ಸೋಮವಾರ ಬೆಳಿಗ್ಗೆ ನಡೆದಿದ್ದು, ಕಾರು ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.



ಬೆಂಗಳೂರಿನಿಂದ ಕಾಸರಗೋಡಿಗೆ ಬರುತ್ತಿದ್ದಾಗ ಈ ಅಪಘಾತ ನಡೆದಿದೆ.
ಸ್ಥಳೀಯರು ಕಾರಲ್ಲಿ ಸಿಲುಕಿದ್ದ ಚಾಲಕನನ್ನು ಮೇಲಕ್ಕೆತ್ತಿದರು. ಈ ಪ್ರದೇಶದಲ್ಲಿ ಆಗಾಗೆ ಅಪಘಾತಗಳು ನಡೆಯುತ್ತಿದ್ದು, ರಸ್ತೆ ಬದಿ ತಡೆಗೋಡೆ ನಿರ್ಮಿಸಬೇಕೆಂಬ ಒತ್ತಾಯ ಕೇಳಿಬರುತ್ತಿದೆ.