ಮಂಗಳೂರು, ಮೇ 29 : ವಾಯುಭಾರ ಕುಸಿತದಿಂದ ಕರಾವಳಿಯಾದ್ಯಂತ ಮಂಗಳವಾರ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ತಗ್ಗು ಪ್ರದೇಶಗಳಲ್ಲಿ ಕೃತಕ ನೆರೆ ಕಂಡುಬಂದಿದೆ. ನಗರದಲ್ಲಿ ವರುಣನ ಅರ್ಭಟ ಜೋರಾಗಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸಿದೆ.
ಮಳೆಯ ಅವಾಂತರಕ್ಕೆ ಮರಗಳು , ವಿದ್ಯುತ್ ಕಂಬಗಳು ಧರೆಗಳಿವೆ.ಬೈಂಪಾಡಿಯ ಇಂಡಸ್ಟ್ರಿಯಲ್ ಏರಿಯಾದಲ್ಲಿ ಭಾರೀ ಮಳೆಯಿಂದಾಗಿ ಹಲವೆಡೆ ಕಾರ್ಖಾನೆಗಳಿಗೆ ನೀರು ನುಗ್ಗಿರುವುದು ವರದಿಯಾಗಿದೆ. ಕೂಳೂರಿನಲ್ಲಿ ರಸ್ತೆಯಲ್ಲಿ ನೀರು ನಿಂತ ಪರಿಣಾಮ ವಾಹನ ಸಂಚಾರಕ್ಕೆ ತೊಡಕುಂಟಾಗಿದೆ.
ಮೇ 28 ಮತ್ತು 30 ರಂದು ಉಡುಪಿ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.ಇನ್ನು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ ,ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.