ಪುತ್ತೂರು, ನ.02 (DaijiworldNews/PY): ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದವರಿಗೆ ಕಾರೊಂದು ಡಿಕ್ಕಿ ಹೊಡೆದು ಓರ್ವ ಬಾಲಕಿ ಮೃತಪಟ್ಟಿದ್ದು, ಬಾಲಕಿ ಹಾಗೂ ಮಹಿಳೆ ಗಂಭೀರ ಗಾಯಗೊಂಡ ಘಟನೆ ಪುತ್ತೂರಿನ ದರ್ಬೆ ಬೈಪಾಸ್ನ ಸೋಮವಾರ ನಡೆದಿದೆ.



ಮೃತ ಬಾಲಕಿಯನ್ನಯ ಸ್ವಾತಿ (9) ಎನ್ನಲಾಗಿದೆ.
ದರ್ಬೆ ಬೈಪಾಸ್ನ ರಸ್ತೆಯ ಬದಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಕ್ಕಳಿಗೆ ಹಾಗೂ ಓರ್ವ ಮಹಿಳೆಗೆ ಮಂಗಳೂರಿನಿಂದ ಜಾಲ್ಸೂರಿಗೆ ಚಲಿಸುತ್ತಿದ್ದ ಸ್ವಿಫ್ಟ್ ಕಾರೊಂದು ಡಿಕ್ಕಿ ಹೊಡೆದಿದ್ದು, ಮುಂಭಾಗದಲ್ಲಿ ನಿಂತಿದ್ದ ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದಿದೆ.
ಕಾರು ಡಿಕ್ಕಿ ಹೊಡೆದ ಪರಿಣಾಮ ಓರ್ವ ಬಾಲಕಿ ಸಾವನ್ನಪ್ಪಿದ್ದು, ಇನ್ನೋರ್ವ ಬಾಲಕಿ ಹಾಗೂ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣವೇ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ,.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.