ಉಡುಪಿ, ನ. 02 (DaijiworldNews/SM): ಅನ್ನಭಾಗ್ಯದ ಅಕ್ಕಿ ಅಕ್ರಮವಾಗಿ ಮಾರಾಟಕ್ಕೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಜಿಲ್ಲಾಧಿಕಾರಿ ಜಿ. ಜಗದೀಶ್ ನೇತೃತ್ವದ ತಂಡ ಸುಮಾರು 600ಕ್ಕೂ ಅಧಿಕ ಕ್ವಿಂಟಾಲ್ ಅಕ್ಕಿಯನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ನಡೆದಿದೆ.


ಬ್ರಹ್ಮಾವರದ ಶಿರಿಯಾರದಲ್ಲಿ ಅಕ್ರಮವಾಗಿ ಅಕ್ಕಿ ಸಾಗಾಟ ಬೆಳಕಿಗೆ ಬಂದಿದೆ. ಜಿಲ್ಲಾಡಳಿತದಿಂದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ. ಇದರಿಂದಾಗಿ ಸುಮಾರು 600ಕ್ಕೂ ಅಧಿಕ ಕ್ವಿಂಟಾಲ್ ಅಕ್ಕಿ ವಶ ಪಡಿಸಿಕೊಳ್ಳಲಾಗಿದೆ.
ಇನ್ನು ದಾಳಿಯ ಬಳಿಕ ಮಾತನಾಡಿರುವ ಜಿಲ್ಲಾಧಿಕಾರಿ ಜಿ. ಜಗದೀಸ್ ಮಾತನಾಡಿ, ಸಾರ್ವಜನಿಕರು ಇಂತಹ ಜಾಲದ ಕುರಿತು ಎಚ್ಚರದಿಂದಿರಬೇಕು. ಪಡಿತರ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡಬೇಡಿ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದ್ದಾರೆ.