ಮಂಗಳೂರು, ನ. 02 (DaijiworldNews/SM): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಬರುತ್ತಿದೆ. ಸೋಮವಾರದಂದು 51 ಹೊಸ ಕರೋನಾ ಪ್ರಕರಣಗಳು ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 30,392 ಕ್ಕೆ ಏರಿಕೆಯಾಗಿದೆ. ಈ ಪೈಕಿ 1712 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.

ಒಟ್ಟು 121 ಜನರನ್ನು ಸೋಮವಾರ ಬಿಡುಗಡೆ ಮಾಡಲಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 27,999 ಕ್ಕೆ ಏರಿಕೆಯಾಗಿದೆ. ಸೋಮವಾರದಂದು ಒಬ್ಬರು ಸೇರಿದಂತೆ ಒಟ್ಟು 679 ಮಂದಿ ದ.ಕ. ಜಿಲ್ಲೆಯಲ್ಲಿ ಸೋಂಕಿಗೆ ಬಲಿಯಾಗಿದ್ದಾರೆ.
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಇನ್ನು ಉಡುಪಿ ಜಿಲ್ಲೆಯಲ್ಲಿ ಸೋಮವಾರ 31 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 21,965 ಕ್ಕೆ ಏರಿಕೆಯಾಗಿದೆ. ಈ ಪೈಕಿ 551 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ. ಇಲ್ಲಿಯವರೆಗೆ 1,86,878 ಮಂದಿಯನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 1,64,913 ಮಂದಿಯ ವರದಿ ನೆಗೆಟಿವ್ ಆಗಿದೆ. ಸೋಮವಾರ 137 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಒಟ್ಟು ಗುಣಮುಖರಾದವರ ಸಂಖ್ಯೆ 21,232 ಕ್ಕೆ ಏರಿಕೆಯಾಗಿದೆ. ಸೋಮವಾರ ಒಂದು ಸಾವು ಸೇರಿದಂತೆ ಒಟ್ಟು 183 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.