ಉಡುಪಿ, ನ.03 (DaijiworldNews/PY): ಮಣಿಪಾಲ - ಪೆರಂಪಳ್ಳಿ - ಅಂಬಾಗಿಲು ರಸ್ತೆ ಅಗಲೀಕರಣ ಸಂಬಂಧ ಭೂಸ್ವಾಧೀನ ಪಡಿಸಲು ಟಿ.ಡಿ.ಆರ್. ಪ್ರಕ್ರಿಯೆಗೆ ನೋಟಿಫಿಕೇಶನ್ ಆಗಿರುವಂತೆ ಭೂಸ್ವಾಧೀನದ ಬಗ್ಗೆ ಭೂಮಾಲಕರೊಂದಿಗೆ ಶಾಸಕ ಕೆ. ರಘುಪತಿ ಭಟ್ ಅವರು ನ.2ರ ಸೋಮವಾರದಂದು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯ ಸಭಾಂಗಣದಲ್ಲಿ ಸಭೆ ನಡೆಸಿದರು.


ದಿನವಿಡೀ ನಡೆದ ಸಭೆಯಲ್ಲಿ 32 ಭೂ ಮಾಲೀಕರೊಂದಿಗೆ ಚರ್ಚಿಸಿದ್ದು, 27 ಮಂದಿ ಒಪ್ಪಿಗೆ ಸೂಚಿಸಿದರು. 5 ಮಂದಿ ಮುಂದಿನ ದಿನಗಳಲ್ಲಿ ಅಭಿಪ್ರಾಯ ತಿಳಿಸುವುದಾಗಿ ಹೇಳಿದ್ದಾರೆ
ಈ ಸಂದರ್ಭ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ನಗರಸಭಾ ಸದಸ್ಯ ಗಿರಿಧರ್ ಕರಂಬಳ್ಳಿ, ಉಡುಪಿ ತಹಶೀಲ್ದಾರ ಪ್ರದೀಪ್ ಕುರ್ಡೆಕರ್, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರ ಜಗದೀಶ್ ಭಟ್, ಕಿರಿಯ ಅಭಿಯಂತರ ಸೋಮನಾಥ್, ನಗರಾಭಿವೃದ್ಧಿ ಪ್ರಾಧಿಕಾರದ ಜಿತೇಶ್ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರುಗಳಾದ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಕಿಶೋರ್ ಕುಮಾರ್, ದಿನಕರ್ ಪೂಜಾರಿ, ಸುಮಾ ನಾಯ್ಕ್, ಉಪಸ್ಥಿತರಿದ್ದರು.