ಉಡುಪಿ, ನ. 03 (DaijiworldNews/MB) : ಅಯೋಧ್ಯೆಯಲ್ಲಿ ಕರ್ನಾಟಕ ಯಾತ್ರಿಕರಿಗಾಗಿ ಭವನ ನಿರ್ಮಾಣ ಮಾಡಲು ಶೀಘ್ರದಲ್ಲೇ ಭೂಮಿಯನ್ನು ಮಂಜೂರು ಮಾಡುವುದಾಗಿ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಭರವಸೆ ನೀಡಿದ್ದಾರೆ.



ಭವಿಷ್ಯದಲ್ಲಿ ಅಯೋಧ್ಯೆಗೆ ಭೇಟಿ ನೀಡಲಿರುವ ರಾಜ್ಯದ ಭಕ್ತರ ಅನುಕೂಲಕ್ಕಾಗಿ ಕರ್ನಾಟಕ ಯಾತ್ರಿ ಭವನ ನಿರ್ಮಾಣಕ್ಕೆ ಭೂಮಿ ಕೋರಿ ಕರ್ನಾಟಕ ಸಿಎಂ ಬಿ ಎಸ್ ಯಡಿಯೂರಪ್ಪನವರು ಯುಪಿ ಸಿಎಂಗೆ ಪತ್ರ ಬರೆದಿದ್ದರು.
ಉಡುಪಿ ಪೇಜಾವರ ಮಠದ ಸ್ವಾಮೀಜಿ ಶ್ರೀ ವಿಶ್ವಪ್ರಸನ್ನ ತೀರ್ಥ, ಸೋಮವಾರ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾಗಿ ಅಯೋಧ್ಯೆಯಲ್ಲಿ ಭೂಮಿ ಕೋರಿ ಯಡಿಯೂರಪ್ಪ ಅವರು ಬರೆದ ಪತ್ರದ ಬಗ್ಗೆ ಪ್ರಸ್ತಾಪಿಸಿದರು.
ಇದಕ್ಕೆ ಪ್ರತಿಕ್ರಿಯೆ ನೀಡಿದ ಯೋಗಿ ಆದಿತ್ಯನಾಥ್ ಅವರು, ಶೀಘ್ರದಲ್ಲೇ ಅಯೋಧ್ಯೆಯಲ್ಲಿ ಕರ್ನಾಟಕ ಯಾತ್ರಿ ಭವನ ನಿರ್ಮಾಣಕ್ಕಾಗಿ ಶೀಘ್ರದಲ್ಲೇ ಭೂಮಿಯನ್ನು ಮಂಜೂರು ಮಾಡುವುದಾಗಿ ಭರವಸೆ ನೀಡಿದ್ದಾರೆ ಎಂದು ಪೇಜಾವರ ಸ್ವಾಮೀಜಿ ತಿಳಿಸಿದ್ದಾರೆ.