ಕಾಸರಗೋಡು, ನ. 03 (DaijiworldNews/MB) : ಜಿಲ್ಲೆಯಲ್ಲಿ ಮಂಗಳವಾರ 147 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.

ಈ ಪೈಕಿ 145 ಮಂದಿಗೆ ಸಂಪರ್ಕದಿಂದ ಸೋಂಕು ಪತ್ತೆಯಾಗಿದ್ದು ನಾಲ್ವರು ಆರೋಗ್ಯ ಕಾರ್ಯಕರ್ತರಿಗೂ ಸೋಂಕು ತಗುಲಿದೆ.
292 ಮಂದಿ ಗುಣಮುಖರಾಗಿದ್ದಾರೆ. 1448 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈವರೆಗೆ 18,988 ಮಂದಿಗೆ ಸೋಂಕು ತಗುಲಿದ್ದು, ಈ ಪೈಕಿ 17, 281 ಮಂದಿಗೆ ಸಂಪರ್ಕದಿಂದ ಸೋಂಕು ದೃಢಪಟ್ಟಿದೆ. 17213 ಮಂದಿ ಗುಣಮುಖರಾಗಿದ್ದು, 197 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ 4468 ಮಂದಿ ನಿಗಾದಲ್ಲಿದ್ದಾರೆ.