ಮಂಗಳೂರು, ನ. 03 (DaijiworldNews/SM): ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದ ಘಟನೆ ನಗರದ ಕಾವೂರಿನ ಮಲ್ಲಿ ಕಾಲೊನಿಯಲ್ಲಿ ನಡೆದಿದೆ. ಸುರೇಂದ್ರನ್(50) ಕೊಲೆಯಾದ ವ್ಯಕ್ತಿ.

ಮಂಗಳವಾರದಂದು ಸಂಜೆ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಸ್ಥಳೀಯರು ಕೂಡ ಶಂಕೆ ವ್ಯಕ್ತಪಡಿಸಿದ್ದಾರೆ. ಆದರೆ, ನಿಖರ ಕಾರಣ ಪೊಲೀಸ್ ಮೂಲಗಳಿಂದ ತಿಳಿದುಬಂದಿಲ್ಲ.
ಇನ್ನು ಘಟನಾ ಸ್ಥಳಕ್ಕೆ ಕಾವೂರು ಠಾಣಾ ಪೊಲೀಸರು ಈಗಾಗಲೇ ದೌಡಾಯಿಸಿದ್ದು ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ. ಪೊಲೀಸ್ ತನಿಖೆಯ ಬಳಿಕ ಪ್ರಕರಣ ಬಗ್ಗೆ ನಿಖರ ಮಾಹಿತಿಗಳು ಲಭ್ಯವಾಗಲಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ