ಮಂಗಳೂರು, ನ. 03 (DaijiworldNews/SM): ದ.ಕ. ಜಿಲ್ಲೆಯಲ್ಲಿ ಬುಧವಾರದಂದು 123 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ 147 ಮಂದಿ ಗುಣಮುಖರಾಗಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಗುಣಮುಖರಾದವರ ಸಂಖ್ಯೆ 28146ಕ್ಕೆ ಏರಿಕೆಯಾಗಿದೆ.

ಇನ್ನು ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ಪಾಸಿಟಿವ್ ಪ್ರಕರಣಗಳು 305115ಕ್ಕೆ ಏರಿಕೆಯಾಗಿದೆ. ಈ ಪೈಕಿ 1687 ಮಂದಿ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಮಂಗಳವಾರದಂದು ಮತ್ತೆ ಒಬ್ಬರು ಸೋಂಕಿಗೆ ಬಲಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 680ಕ್ಕೆ ಏರಿಕೆಯಾಗಿದೆ.
ಇನ್ನು ಜಿಲ್ಲೆಯಲ್ಲಿ ಇಲ್ಲಿಯ ತನಕ 261357 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಪೈಕಿ 230842 ಮಂದಿಯ ವರದಿ ನೆಗೆಟಿವ್ ಬಂದಿದೆ.