ಮಂಗಳೂರು, ನ. 03 (DaijiworldNews/SM): ಸರಕಾರದ ಆದೇಶವನ್ನು ಉಲ್ಲಂಘಿಸಿ ಮಾಸ್ಕ್ ಧರಿಸದೇ ಇರುವವರ ವಿರುದ್ಧ ಕಾರ್ಯಾಚರಣೆ ಮುಂದುವರೆಸಲಾಗಿದೆ. ಪ್ರತಿನಿತ್ಯ ಮಾಸ್ಕ್ ಉಲ್ಲಂಘನೆಯ ಹೊಸ ಹೊಸ ಪ್ರಕರಣಗಳು ದಾಖಲಾಗುತ್ತಿದ್ದು, ದ.ಕ. ಜಿಲ್ಲೆಯಲ್ಲಿ ಇಲ್ಲಿಯ ತನಕ ಒಟ್ಟು 10991 ಪ್ರಕರಣಗಳು ಪತ್ತೆಯಾಗಿವೆ.

ಈ ಬಗ್ಗೆ ಜಿಲ್ಲಾಡಳಿತ ಅಧಿಕೃತ ವರದಿ ನೀಡಿದೆ. 10991 ಪ್ರಕರಣಗಳಿಂದ ಸುಮಾರು 1207627 ರೂಪಾಯಿಗಳನ್ನು ದಂಡದ ರೂಪದಲ್ಲಿ ಸಂಗ್ರಹಿಸಲಾಗಿದೆ. ಪೊಲೀಸ್ ಇಲಾಖೆ ಜಿಲ್ಲಾಡಳಿತ ಹಾಗೂ ಅಧಿಕಾರಿಗಳು ಕಾರ್ಯಾಚರಣೆ ಮುಂದುವರೆಸಿದ್ದಾರೆ.
ಇನ್ನು ಸಾರ್ವಜನಿಕ ಪ್ರದೇಶದಲ್ಲಿ ಪ್ರಯಾಣಿಸುವವರು, ವಾಹನಗಳಲ್ಲಿ ಸಂಚರಿಸುವವರು ಕಚೇರಿಗಳಿಗೆ ತೆರಳುವವರು ಕಡ್ಡಾಯವಾಗಿ ಮಾಸ್ಕ್ ಧರಿಸಲೇಬೇಕಾಗಿದೆ. ಜಿಲ್ಲೆಯಲ್ಲಿ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಜಿಲ್ಲಾಡಳಿತದೊಂದಿಗೆ ಸಹಕಾರ ನೀಡಬೇಕಾದ ಅವಶ್ಯಕತೆ ಇದೆ.