ಮಂಗಳೂರು, ನ.07 (DaijiworldNews/PY): ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆಯಾಗಿದ್ದು, ಶನಿವಾರದಂದು 72 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.

ಶನಿವಾರ 72 ಮಂದಿಗೆ ಕೊರೊನಾ ದೃಢಪಟ್ಟಿದ್ದು ಈವರೆಗೆ ಒಟ್ಟು 30,819 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ನಡುವೆ ಶನಿವಾರ 169 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇಲ್ಲಿವರೆಗೆ ಒಟ್ಟು 29,103 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಕೊರೊನಾ ಸೋಂಕಿಗೆ ಇಂದು ಒಂದು ಬಲಿಯಾಗಿದ್ದು, ಈವರೆಗೆ ಒಟ್ಟು 687 ಮಂದಿ ಸಾವನ್ನಪ್ಪಿದ್ದಾರೆ. ಇನ್ನು ಜಿಲ್ಲೆಯಲ್ಲಿ ಒಟ್ಟು 1,029 ಪ್ರಕರಣಗಳು ಸಕ್ರಿಯವಾಗಿವೆ.