ಕಾಸರಗೋಡು, ನ. 08 (DaijiworldNews/SM): ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಥಮ ಆರೋಪಿಯಾಗಿರುವ ಜುವೆಲ್ಲರಿಯ ವ್ಯವಸ್ಥಾಪಕ ನಿರ್ದೇಶಕ ಟಿ.ಕೆ ಪೂಕೋಯ ತಂಘಳ್ ವಿರುದ್ಧ ತನಿಖಾ ತಂಡ ಲುಕ್ ಔಟ್ ನೋಟಿಸ್ ಬಿಡುಗಡೆಗೊಳಿಸಿದೆ.

ಪೂಕೋಯ ತಂಘಳ್ ತಲೆಮರೆಸಿಕೊಂಡಿರುವುದಾಗಿ ತನಿಖಾ ಅಧಿಕಾರಿಗಳು ತಿಳಿಸಿದ್ದಾರೆ. ಪೂಕೋಯ ತಂಘಳ್ನ ಪತ್ತೆಗೆ ತನಿಖಾ ತಂಡ ತನಿಖೆಯನ್ನು ಚುರುಕುಗೊಳಿಸಿದೆ.
ಶನಿವಾರ ತಂಘಳ್ನನ್ನು ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದರೂ ತಲುಪಿರಲಿಲ್ಲ ಬಂಧನ ಭಯದಿಂದ ತಲೆ ಮರೆಸಿಕೊಂಡಿದ್ದಾನೆ ಎನ್ನಲಾಗಿದೆ. ಈ ನಡುವೆ ಎರಡನೇ ಆರೋಪಿ ಎಂ.ಸಿ ಕಮರುದ್ದೀನ್ನನ್ನು ಹೆಚ್ಚಿನ ವಿಚಾರಣೆಗೆ ಕಸ್ಟಡಿಗೆ ಒಪ್ಪಿಸುವಂತೆ ತನಿಖಾ ತಂಡ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ತೀರ್ಮಾನಿಸಿದೆ. ಎರಡು ದಿನ ಕಸ್ಟಡಿಗೆ ಒಪ್ಪಿಸುವಂತೆ ಮನವಿ ಮಾಡಲು ನಿರ್ಧರಿಸಿದೆ.
ಇನ್ನು ಜಾಮೀನು ಕೋರಿ ಕಮರುದ್ದೀನ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಾಳೆ ನಡೆಯಲಿದೆ.