ಮಂಗಳೂರು, ನ. 08 (DaijiworldNews/SM): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನವೆಂಬರ್ 8 ರ ರವಿವಾರದಂದು 78 ಹೊಸ ಕೊರೋನಾ ವೈರಸ್ ಪ್ರಕರಣಗಳು ವರದಿಯಾಗಿದ್ದು, ಉಡುಪಿಯಲ್ಲಿ 42 ಹೊಸ ಪ್ರಕರಣಗಳು ದಾಖಲಾಗಿವೆ.

ಇದರೊಂದಿಗೆ ದ.ಕ. ಜಿಲ್ಲೆಯಲ್ಲಿ ಈವರೆಗೆ ಒಟ್ಟು ಕರೋನಾ ವೈರಸ್ ಪ್ರಕರಣಗಳ ಸಂಖ್ಯೆ 30,897ಕ್ಕೆ ಏರಿಕೆಯಾಗಿದೆ. 98 ರೋಗಿಗಳು ಚೇತರಿಸಿಕೊಂಡು ಭಾನುವಾರ ಆಸ್ಪತ್ರೆಗಳಿಂದ ಬಿಡುಗಡೆಗೊಂಡರು. ಜಿಲ್ಲೆಯಲ್ಲಿ ರವಿವಾರ ಒಬ್ಬರು ಸೋಂಕಿಗೆ ಬಲಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 688ಕ್ಕೆ ಏರಿಕೆಯಾಗಿದೆ.
ಉಡುಪಿ ಜಿಲ್ಲೆಯ ರವಿವಾರದ ಕೊರೋನಾ ವರದಿ:
ಜಿಲ್ಲಾ ಆರೋಗ್ಯ ಬುಲೆಟಿನ್ ಪ್ರಕಾರ, ಈವರೆಗೆ 1,97,620 ಮಂದಿ ಪರೀಕ್ಷೆಗೆ ಒಳಗಾಗಿದ್ದು, ಅದರಲ್ಲಿ 1,175,417 ಮಂದಿಯ ವರದಿ ನೆಗೆಟಿವ್ ಆಗಿದೆ. ಭಾನುವಾರ ಒಟ್ಟು 42 ಪ್ರಕರಣಗಳು ವರದಿಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 22,203 ಕ್ಕೆ ತಲುಪಿದೆ. ಈ ಪೈಕಿ 187 ಮಂದಿ ಮಾತ್ರವೇ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆಸ್ಪತ್ರೆಗಳಿಂದ ಭಾನುವಾರ 41 ರೋಗಿಗಳನ್ನು ಬಿಡುಗಡೆ ಮಾಡಲಾಗಿದ್ದು, ಒಟ್ಟು ಚೇತರಿಕೆ ಸಂಖ್ಯೆ 21,639 ಕ್ಕೆ ತಲುಪಿದೆ.