ಕಾಸರಗೋಡು, ನ.09 (DaijiworldNews/PY): ಬಂದ್ಯೋಡು ಸಮೀಪದ ಅಡ್ಕದಲ್ಲಿ ನಡೆದ ಗುಂಡಿನ ದಾಳಿ ಹಾಗೂ ಕೊಲೆ ಬೆದರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಉಳಿಯತ್ತಡ್ಕದ ಸಮದಾನಿ (28) ಎಂದು ಗುರುತಿಸಲಾಗಿದೆ. ಈ ಮೂಲಕ ಬಂಧಿತರ ಸಂಖ್ಯೆ ನಾಲ್ಕಕ್ಕೇರಿದೆ.
ಈತನ ವಿರುದ್ದ ಕುಂಬಳೆ, ಮಂಜೇಶ್ವರ, ವಿದ್ಯಾನಗರ, ಕಾಸರಗೋಡು, ಬದಿಯಡ್ಕ ಠಾಣಾ ವ್ಯಾಪ್ತಿಯಲ್ಲಿ ಎಂಟಕ್ಕೂ ಅಧಿಕ ಪ್ರಕರಣಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಹರಣ, ಲೂಟಿ, ಗಾಂಜಾ ಪ್ರಕರಣಗಳು ಈತನ ಮೇಲಿದೆ. ಕೆಲ ದಿನಗಳ ಹಿಂದೆ ಮಂಜೇಶ್ವರ ಕೊಡ್ಲಮೊಗರು ಎಂಬಲ್ಲಿ ಪೊಲೀಸ್ ವಾಹನಕ್ಕೆ ಈತ ಇನ್ನೊಂದು ವಾಹನ ಡಿಕ್ಕಿ ಹೊಡೆಸಿ ಪರಾರಿಯಾಗಿದ್ದನು. ಉಳಿದ ಆರೋಪಿಗಳಿಗಾಗಿ ಶೋಧ ನಡೆಯುತ್ತಿದೆ.