ಕಾಸರಗೋಡು, ನ.09 (DaijiworldNews/HR): ಫ್ಯಾಶನ್ ಗೋಲ್ಡ್ ಜುವೆಲ್ಲರಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಮಂಜೇಶ್ವರ ಶಾಸಕ ಎಂ.ಸಿ ಕಮರುದ್ದೀನ್ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಹೊಸದುರ್ಗ ನ್ಯಾಯಾಲಯದಲ್ಲಿ ಆರಂಭಗೊಂಡಿದ್ದು, ಕಮರುದ್ದೀನ್ ಪರ ಹಿರಿಯ ನ್ಯಾಯವಾದಿ ಸಿ.ಕೆ ಶ್ರೀಧರನ್ ಹಾಜರಾಗಿದ್ದಾರೆ.

ಈ ನಡುವೆ ಕಸ್ಟಡಿಗೆ ಒಪ್ಪಿಸುವಂತೆ ಕ್ರೈಂ ಬ್ರಾಂಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು ಮಧ್ಯಾಹ್ನ 2:30ಕ್ಕೆ ಕಮರುದ್ದೀನ್ ನನ್ನು ಹಾಜರುಪಡಿಸುವಂತೆ ನ್ಯಾಯಾಲಯ ತನಿಖಾ ತಂಡಕ್ಕೆ ತಿಳಿಸಿದ್ದು, ಇದೀಗ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಬುಧವಾರಕ್ಕೆ ಮುಂದೂಡಿದೆ.
ಪ್ರಕರಣದ ಪ್ರಥಮ ಆರೋಪಿ ಟಿ.ಕೆ ಪೂಕೋಯ ತಂಘಳ್ ನ್ಯಾಯಾಲಯಕ್ಕೆ ಶರಣಾಗುವ ಸಾಧ್ಯತೆ ಇದೆ ಎಂಬ ಮಾಹಿತಿ ತನಿಖಾ ತಂಡಕ್ಕೆ ಲಭಿಸಿದೆ. ಈ ಹಿನ್ನಲೆಯಲ್ಲಿ ನ್ಯಾಯಾಲಯ ಪರಿಸರದಲ್ಲಿ ಪೊಲೀಸರು ಬಂದೋ ಬಸ್ತ್ ಏರ್ಪಡಿಸಿದ್ದಾರೆ.