ಮಂಗಳೂರು ಜೂ, 01: ಕಡಲ ನಗರಿ ಮಂಗಳೂರಿನಲ್ಲಿ ಚರ್ಚ್ ಮೇಲೆ ದಾಳಿಯಾಗಿದೆ ಎಂದು ಎಲ್ಲೆಡೆ ಸುಳ್ಳು ಸುದ್ದಿ ಹರಡಿಸಿದ ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ಸಮೀಪದ ಅರಳಿಕೊಪ್ಪ ಗ್ರಾಮದ ಗುಡ್ಡಿಕೆರೆ ನಿವಾಸಿಗಳಾದ ಸುನಿಲ್ ವೇಗಸ್ (34) ಮತ್ತು ಸಚಿತ್ ಪಿ.ಪಿ. (23) ಬಂಧಿತ ಆರೋಪಿಗಳು.
ಆರೋಪಿಗಳು ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಘೋಷಣೆಯಾಗುತ್ತಿದ್ದಂತೆ ಮಂಗಳೂರಿನಲ್ಲಿ ಚರ್ಚ್ ಮೇಲೆ ದಾಳಿಯಾಗಿದೆ ಎಂದು ಸಾಮಾಜಿಕ ತಾಣಗಳಲ್ಲಿ ಸುಳ್ಳು ಸಂದೇಶಗಳನ್ನು ಹರಿಯ ಬಿಟ್ಟಿದ್ದರು . ಮಂಗಳೂರು ನಗರದಲ್ಲಿ ಚರ್ಚ್ ಮೇಲೆ ದಾಳಿಯಾಗಿದೆ. ಪೊಲೀಸರೊಂದಿಗೆ ಸೇರಿ ಚರ್ಚ್ ಮೇಲೆ ದಾಳಿ ನಡೆಸಿ ದ್ವಂಸಗೊಳಿಸಿದ್ದಾರೆ ಎಂದು ಸುಳ್ಳು ಸಂದೇಶಗಳನ್ನು ವಾಟ್ಸಪ್ ಗ್ರೂಪ್ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು.
ಈ ಹಿನ್ನೆಲೆ ಸ್ವಯಂ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಮಂಗಳೂರು ಸೆಂಟ್ರಲ್ ವಿಭಾಗದ ಎಸಿಪಿ ನೇತೃತ್ವದಲ್ಲಿ ತನಿಖೆ ನಡೆಸಿ ಈ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.