ಮಂಗಳೂರು, ನ. 09 (DaijiworldNews/SM): ದ.ಕ. ಜಿಲ್ಲೆಯಲ್ಲಿ ಕೊರೋನಾ ಬಹುತೇಕ ನಿಯಂತ್ರಣದ ಹಾದಿಯಲ್ಲಿ ಸಾಗುತ್ತಿದೆ. ಸೋಮವಾರದಂದು ದ.ಕ. ಜಿಲ್ಲೆಯಲ್ಲಿ ಸೋಮವಾರದಂದು 18 ಮಂದಿಯಲ್ಲಿ ಮಾತ್ರವೇ ಸೋಂಕು ಪತ್ತೆಯಾಗಿದ್ದು, ಆ ಮೂಲಕ ಸೋಂಕಿತರ ಸಂಖ್ಯೆ ಇಳಿಮುಖದತ್ತ ಸಾಗಿದೆ.

ದ.ಕ. ಜಿಲ್ಲೆಯ ಸೋಮವಾರ ಜಿಲ್ಲಾಡಳಿ, ಆರೋಗ್ಯ ಇಲಾಖೆ ನೀಡಿರುವ ಕೊರೋನಾ ವರದಿ:
ದ.ಕ. ಜಿಲ್ಲೆಯಲ್ಲಿ ಒಟ್ಟು ಪರೀಕ್ಷೆಗೊಳಪಟ್ಟವರು 277019
ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ನೆಗೆಟಿವ್ ಪ್ರಕರಣಗಳು 246104
ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ಪಾಸಿಟಿವ್ ಪ್ರಕರಣಗಳು 30915
ಸೋಮವಾರದಂದು ಪತ್ತೆಯಾದ ಪಾಸಿಟಿವ್ ಪ್ರಕರಣಗಳು 18
ಜಿಲ್ಲೆಯಲ್ಲಿ ಗುಣಮುಖರಾಗಿ ಬಿಡುಗಡೆಗೊಂಡವರು 155
ಜಿಲ್ಲೆಯಲ್ಲಿ ಒಟ್ಟು ಗುಣಮುಖರಾದವರು-29356 ಮಂದಿ
ಜಿಲ್ಲೆಯಲ್ಲಿ ಒಟ್ಟು ಸೋಂಕಿಗೆ ಬಲಿಯಾದವರು 688 ಮಂದಿ
ದ.ಕ. ಜಿಲ್ಲೆಯಲ್ಲಿ ಪ್ರಸ್ತುತ ಚಿಕಿತ್ಸೆಯಲ್ಲಿರುವವರು-871 ಮಂದಿ