ಮಂಗಳೂರು, ನ. 10 (DaijiworldNews/MB) : ಕರ್ನಾಟಕದಲ್ಲಿ ನಡೆದ ಉಪಚುನಾವಣೆಗಳಲ್ಲಿ ಪಕ್ಷವು ಗೆಲುವು ಸಾಧಿಸಿದ ಹಾಗೂ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಮುನ್ನಡೆ ಸಾಧಿಸಿರ೮ವ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿ ನವೆಂಬರ್ 10 ಮಂಗಳವಾರ ಪಿವಿಎಸ್ ಸರ್ಕಲ್ನಲ್ಲಿ ಸಂಭ್ರಮಾಚರಣೆಯನ್ನು ನಡೆಸಿತು.





ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, ''ನಿರೀಕ್ಷೆಯಂತೆ ಆರ್ ಆರ್ ನಗರ ಮತ್ತು ಶಿರಾ ಕ್ಷೇತ್ರಗಳಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಜಯ ಸಾಧಿಸಿದೆ. ಪ್ರಧಾನಿ ನರೇಂದ್ರ ಮೋದಿಯವರ ಆಡಳಿತವನ್ನು ಗಣನೆಗೆ ತೆಗೆದುಕೊಂಡ ಜನರು ಬಿಜೆಪಿಯನ್ನು ಆಶೀರ್ವದಿಸಿದ್ದಾರೆ. ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ದೃಷ್ಟಿಕೋನವನ್ನು ಇನ್ನಷ್ಟು ಬಲಪಡಿಸುವ ಅಗತ್ಯವಿದೆ'' ಎಂದು ಹೇಳಿದರು.
''ಜನರ ನಿರೀಕ್ಷೆಗೆ ಅನುಗುಣವಾಗಿ ಬಿಜೆಪಿ ಕೆಲಸ ಮಾಡುತ್ತದೆ. ಬಿಹಾರ, ಕರ್ನಾಟಕ ಮತ್ತು ಮಧ್ಯಪ್ರದೇಶದ ಜನರು ಯಾವಾಗಲೂ ಬಿಜೆಪಿಯನ್ನು ಬೆಂಬಲಿಸುತ್ತಾರೆ. ವಿರೋಧಿಗಳು ಮೋದಿಯವರನ್ನು ಟೀಕಿಸಿದರೂ ಜನರು ಮೋದಿ ಮತ್ತು ಬಿಜೆಪಿಯನ್ನು ಬೆಂಬಲಿಸುತ್ತಾರೆ'' ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಂಗಳೂರು ಶಾಸಕ ವೇದವ್ಯಾಸ್ ಕಾಮತ್, ಜಿಲ್ಲಾ ಪಂಚಾಯತ್ ಅಧ್ಯಕ್ಷ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ ಮತ್ತು ಇತರರು ಉಪಸ್ಥಿತರಿದ್ದರು.