ಕಾರ್ಕಳ, ನ.10 (DaijiworldNews/PY): ದೇಶದಾದ್ಯಂತ ಕುತೂಹಲ ಮೂಡಿಸಿದ್ದ ಬಿಹಾರದ ವಿಧಾನಸಭಾ ಚುನಾವಣಾ ಫಲಿತಾಂಶ ಹಾಗೂ ರಾಜ್ಯದ ಶಿರಾ ಹಾಗೂ ಆರ್.ಆರ್.ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಕಾರ್ಕಳ ಬಸ್ ನಿಲ್ದಾಣದಲ್ಲಿ ಭಾರತೀಯ ಜನತಾ ಪಾರ್ಟಿಯಿಂದ ಸಾರ್ವಜನಿಕರಿಗೆ ಸಿಹಿ ಹಂಚುವ ಮೂಲಕ ವಿಜಯೋತ್ಸವ ಆಚರಿಸಲಾಯಿತು.

ಪಕ್ಷದ ವಕ್ತಾರ ಮುಟ್ಲುಪಾಡಿ ಸತೀಶ್ ಶೆಟ್ಟಿ ಜಯಗಳಿಸಿದ ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಕಾರ್ಕಳ ಶಾಸಕ ವಿ ಸುನಿಲ್ ಕುಮಾರ್, ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ, ಪ್ರಧಾನ ಕಾರ್ಯದರ್ಶಿಗಳಾದ ಜಯರಾಮ್ ಸಾಲ್ಯಾನ್ ಮತ್ತು ನವೀನ್ ನಾಯಕ್, ಪುರಸಭಾ ಅಧ್ಯಕ್ಷೆ ಸುಮ ಕೇಶವ್, ಮಹಿಳಾ ಮೋರ್ಚಾ ಅಧ್ಯಕ್ಷೆ ಮಾಲಿನಿ ಜೆ ಶೆಟ್ಟಿ, ಯುವ ಮೋರ್ಚಾ ಅಧ್ಯಕ್ಷ ಸುಹಾಸ್ ಶೆಟ್ಟಿ ಮುಟ್ಟಲುಪಾಡಿ, ಪಕ್ಷದ ಪ್ರಮುಖರಾದ ಮಹೇಶ್ ಶೆಟ್ಟಿ ಕುಡ್ಪುಲಾಜೆ, ಅಂಥೋಣಿ ಡಿಸೋಜ, ಅನಂತ ಕೃಷ್ಣ ಶೆಣೈ, ಅಶೋಕ್ ಸುವರ್ಣ, ನಿರಂಜನ್ ಜೈನ್, ಅಕ್ಷಯ್ ರಾವ್, ಯುವರಾಜ್ ಶೆಟ್ಟಿ, ಸೋಜನ್ ಪಿ ಜೇಮ್ಸ್ ಪುರಸಭಾ ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.