ಉಡುಪಿ, ನ. 10 (DaijiworldNews/SM): ಉದ್ಯೋಗ ನೀಡುವುದಾಗಿ ಭರವಸೆ ನೀಡಿ ಹಣ ಹಾಗೂ ದಾಖಲೆ ಪತ್ರಗಳನ್ನು ಪಡೆದು ವಂಚಿಸಿಕೊಂಡಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ. ಗಣೇಶ್ ನಾಯ್ಕ್ ಎಂಬ ವ್ಯಕ್ತಿ ವಂಚಿಸಿರುವ ಆರೋಪಿಯಾಗಿದ್ದು, ಆತನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಗಣೇಶ್ ನಾಯ್ಕ್ ಎಂಬ ವ್ಯಕ್ತಿ ತಾನು ಕೊಂಕಣ ರೈಲ್ವೆ ಇಲಾಖೆಯಲ್ಲಿ ಟಿ ಸಿ ಆಗಿರುವುದಾಗಿ ಹೇಳಿ ಪಿರ್ಯಾದುದಾರರಿಗೆ ಉದ್ಯೋಗ ಕೊಡುವುದಾಗಿ ನಂಬಿಸಿ 20,000 ಹಣ ಹಾಗೂ ದಾಖಲೆ ಪತ್ರಗಳನ್ನು ತೆಗೆದುಕೊಂಡು ವಂಚಿಸಿದ್ದಾನೆ. ಅಲ್ಲದೆ, ಮತ್ತೊಬ್ಬ ಯುವತಿಯಿಂದ ಹಣ ಪಡೆದು ನಕಲಿ ನೇಮಕಾತಿ ಪತ್ರವನ್ನು ನೀಡಿ, ಉದ್ಯೋಗ ಕೊಡಿಸದೆ ವಂಚಿಸಿದ್ದಾನೆ. ಈ ಬಗ್ಗೆ ಮೋಸಕ್ಕೊಳಗಾದವರು ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಕರಣದಲ್ಲಿ ಆರೋಪಿತನು ತಾನು ಕೊಂಕಣ ರೈಲ್ವೆ ಇಲಾಖೆಯಲ್ಲಿ ಟಿ.ಸಿ ಅಗಿ ಕೆಲಸ ಮಾಡಿಕೊಂಡಿರುವುದಾಗಿ ಹೇಳಿ ಉಡುಪಿ ಜಿಲ್ಲೆ ಮತ್ತು ಹೊರ ಜಿಲ್ಲೆಗಳಲ್ಲಿ ಸಾರ್ವಜನಿಕರನ್ನು ನಂಬಿಸಿ ಅವರ ಬಳಿ ಹಣ ಮತ್ತು ದಾಖಲಾತಿಯನ್ನು ಪಡೆದುಕೊಂಡು ಸಾರ್ವಜನಿಕರನ್ನು ವಂಚಿಸಿ ಸಾರ್ವಜನಿಕರಿಗೆ ಮೋಸ ಮಾಡಿರುವುದು ತಿಳಿದುಬಂದಿದೆ.
ಈ ಬಗ್ಗೆ ಉಡುಪಿ ನಗರ ಠಾಣೆಯ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.