ಮಂಗಳೂರು,ಜೂ.02: ಉಡುಪಿ ಜಿಲ್ಲೆಯ ಪೆರ್ಡೂರಿನಲ್ಲಿ ದನದ ವ್ಯಾಪಾರಿ ಜೋಕಟ್ಟೆ ನಿವಾಸಿ ಹುಸೈನಬ್ಬ ಸಾವಿಗೆ ಸಂಬಂಧಿಸಿದಂತೆ ಕ್ಷಿಪ್ರಗತಿಯ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿರುವ ಪೊಲೀಸರ ಕರ್ತವ್ಯವನ್ನು ಮಾಜಿ ಸಚಿವ ಹಾಗೂ ಶಾಸಕ ಯು.ಟಿ. ಖಾದರ್ ಶ್ಲಾಘಿಸಿದ್ದಾರೆ.
ಉಡುಪಿ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ಅವರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ನಿರ್ದೇಶನವನ್ನು ಪೊಲೀಸರಿಗೆ ನೀಡಿದ್ದಾರೆ. ಅಲ್ಲದೆ ಕರ್ತವ್ಯ ಪಾಲಿಸುವಲ್ಲಿ ವಿಫಲರಾಗಿರುವ ಎಸ್ ಐರನ್ನು ಅಮಾನತು ಮಾಡಿದ್ದಾರೆ. ಇದೀಗ ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡಿರುವ ಅವರ ಕಾರ್ಯವೈಖರಿಯಿಂದಾಗಿ ಪೊಲೀಸರ ಕಾರ್ಯವೈಖರಿ ಮೇಲೆ ಜನತೆಗೆ ವಿಶ್ವಾಸ ಮೂಡುವಂತಾಗಿದೆ ಎಂದು ಖಾದರ್ ಹೇಳಿದ್ದಾರೆ. ಕೆಲವು ಸೂಕ್ಷ್ಮ ವಿಚಾರಗಳನ್ನು ಮುಂದಿಟ್ಟುಕೊಂಡು ಕಿಡಿಗೇಡಿಗಳು ಸುಳ್ಳು ಸುದ್ದಿ ಹಬ್ಬಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುತ್ತಿರುವುದು ಖಂಡನೀಯ. ಇದಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿರುವುದು ಶ್ಲಾಘನೀಯ ಅಂಶವಾಗಿದೆ. ಸಕಾಲದಲ್ಲಿ ಮಾಡಲಾಗುವು ಇಂತಹ ಕಾರ್ಯಾಚರಣೆಗಳಿಂದ ಸಮಾಜ ಘಾತುಕ ಶಕ್ತಿಗಳಿಗೆ ಕಡಿವಾಣ ಹಾಕಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.