ಕಾಸರಗೋಡು, ನ. 11 (DaijiworldNews/SM): ಜಿಲ್ಲೆಯಲ್ಲಿ ಬುಧವಾರ 141 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಇದರಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 20 ಸಾವಿರ ದಾಟಿದೆ.

ಕಾಸರಗೋಡು ಜಿಲ್ಲೆಯಲ್ಲಿ ಇದುವರೆಗೆ 20,012 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಪೈಕಿ 135 ಮಂದಿಗೆ ಸಂಪರ್ಕದಿಂದ ಸೋಂಕು ಪತ್ತೆಯಾಗಿದೆ. ಹೊರ ರಾಜ್ಯಗಳಿಂದ ಬಂದ ಇಬ್ಬರು, ವಿದೇಶದಿಂದ ಬಂದ ನಾಲ್ವರಿಗೆ ಸೋಂಕು ತಗುಲಿದೆ.
ಬುಧವಾರದಂದು 147 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ ಜಿಲ್ಲೆಯಲ್ಲಿ 1379 ಮಂದಿ ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ 5126 ಮಂದಿ ನಿಗಾದಲ್ಲಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ 18,424 ಮಂದಿ ಗುಣಮುಖರಾಗಿದ್ದು, 209 ಮಂದಿ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.