ಕಾಸರಗೋಡು, ನ.12 (DaijiworldNews/HR): ಫ್ಯಾಶನ್ ಗೋಲ್ಡ್ ಠೇವಣಿ ವಂಚನೆ ಪ್ರಕರಣದ ಆರೋಪಿ ಮಂಜೇಶ್ವರ ಶಾಸಕ ಎಂ. ಸಿ ಕಮರುದ್ದೀನ್ ಜಾಮೀನು ಕೋರಿ ಸಲ್ಲಿಸಿದ್ದಅರ್ಜಿಯನ್ನು ಹೊಸದುರ್ಗ ಮೇಜಿಸ್ಟ್ರೇಟ್ ನ್ಯಾಯಾಲಯ ತಿರಸ್ಕರಿಸಿದೆ.

ಹೊಸದುರ್ಗ ಮೇಜಿಸ್ಟ್ರೇಟ್ ನ್ಯಾಯಾಲಯ ಕಮರುದ್ದೀನ್ ಸಲ್ಲಿಸಿದ್ದ ಅರ್ಜಿಯನ್ನು ಇಂದು ಬೆಳಿಗ್ಗೆ ವಿಚಾರಣೆಗೆ ಕೈಗೆತ್ತಿಕೊಂಡಿತ್ತು.
ಕಮರುದ್ದೀನ್ ವಿರುದ್ದದ ಕೇಸು ರದ್ದುಗೊಳಿಸಲು ಸಾಧ್ಯವಿಲ್ಲ. ಕಮರುದ್ದೀನ್ ವಂಚನೆಯ ಮುಖ್ಯ ಸೂತ್ರಧಾರ ಎಂದು ಪೊಲೀಸರು ನ್ಯಾಯಾಲಯಕ್ಕೆ ವರದಿಯನ್ನು ಸಲ್ಲಿಸಿದೆ.
ವಂಚನೆಗೆ ಸಂಬಂಧಪಟ್ಟಂತೆ ಈಗಾಗಲೇ 128 ರಷ್ಟು ಕೇಸುಗಳು ದಾಖಲಿಸಲಾಗಿದ್ದು, ಪ್ರಕರಣದಿಂದ ಮುಕ್ತಗೊಳಿಸುವಂತೆ ಕಮರುದ್ದೀನ್ ಹೈಕೋರ್ಟ್ಗೆ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು ನಡೆಯಲಿದೆ.