ಉಡುಪಿ, ನ. 12 (DaijiworldNews/SM): ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಳಿಕೆಯಾಗುತ್ತಿದೆ. ಗುರುವಾರದಂದು ಜಿಲ್ಲೆಯಲ್ಲಿ ಮತ್ತೆ 36 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 20 ಮಂದಿ ಗುಣಮುಖರಾಗಿದ್ದಾರೆ.

ಉಡುಪಿ ಜಿಲ್ಲೆಯ ಗುರುವಾರದ ಕೊರೋನಾ ವರದಿ:
ಉಡುಪಿಯಲ್ಲಿ ಗುರುವಾರ 36 ಮಂದಿಯಲ್ಲಿ ಸೋಂಕು
ಜಿಲ್ಲೆಯಲ್ಲಿ ಒಟ್ಟು ಪಾಸಿಟಿವ್ ಪ್ರಕರಣಗಳು 22309ಕ್ಕೆ ಏರಿಕೆ
ಗುರುವಾರದಂದು 20 ಮಂದಿ ಗುಣಮುಖರಾಗಿ ಬಿಡುಗಡೆ
ಜಿಲ್ಲೆಯಲ್ಲಿ ಒಟ್ಟು ಗುಣಮುಖರಾದವರ ಸಂಖ್ಯೆ 2179 ಕ್ಕೆ ಏರಿಕೆ
ಜಿಲ್ಲೆಯಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 187
ಪ್ರಸ್ತುತ ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು 332 ಮಂದಿ
ಜಿಲ್ಲೆಯಲ್ಲಿ ಒಟ್ಟು ಪರೀಕ್ಷೆಗೊಳಪಟ್ಟವರು-205221
ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ನೆಗೆಟಿವ್ ಪ್ರಕರಣಗಳು-182912
ಜಿಲ್ಲೆಯಲ್ಲಿ ಪತ್ತೆಯಾಗಿರುವ ಒಟ್ಟು ಪಾಸಿಟಿವ್ ಕೇಸ್ ಗಳು-22309