ಮಂಗಳೂರು, ನ. 13 (DaijiworldNews/SM): ಜಿಲ್ಲಾ ಆರೋಗ್ಯ ಇಲಾಖೆಯ ವರದಿ ಪ್ರಕಾರ ದ.ಕ. ಜಿಲ್ಲೆಯಲ್ಲಿ ಶುಕ್ರವಾರದಂದು ಮತ್ತೆ 67 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 31,185ಕ್ಕೆ ಏರಿಕೆಯಾಗಿದೆ. ಈ ಪೈಕಿ 873 ಮಂದಿ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ.

ದ.ಕ. ಜಿಲ್ಲೆಯಲ್ಲಿ ಇಲ್ಲಿಯ ತನಕ ಒಟ್ಟು 2,93,579 ಮಂದಿ ಪರೀಕ್ಷೆಗೊಳಪಟ್ಟಿದ್ದಾರೆ. ಈ ಪೈಕಿ 2,62,394 ಮಂದಿಯ ವರದಿ ನೆಗೆಟಿವ್ ಆಗಿದೆ.
ಇನ್ನು ಈ ನಡುವೆ ಶುಕ್ರವಾರದಂದು ಸುಮಾರು 72 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದು, ಒಟ್ಟು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ 29,622ಕ್ಕೆ ತಲುಪಿದೆ. ದ.ಕ. ಜಿಲ್ಲೆಯಲ್ಲಿ ಇಲ್ಲಿಯ ತನಕ ಒಟ್ಟು 690 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಇನ್ನು ಉಡುಪಿ ಜಿಲ್ಲೆಯಲ್ಲಿ ಶುಕ್ರವಾರದಂದು ಇಪ್ಪತ್ತು ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 22,328ಕ್ಕೆ ಏರಿಕೆಯಾಗಿದೆ. ಇವರ ಪೈಕಿ ಪ್ರಸ್ತುತ 300 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇಲ್ಲಿಯ ತನಕ ಒಟ್ಟು 2,07,556 ಮಂದಿ ಕೊರೋನಾ ಪರೀಕ್ಷೆಗೊಳಪಟ್ಟಿದ್ದಾರೆ. ಈ ಪೈಕಿ 1,85,228 ಮಂದಿಯ ವರದಿ ನೆಗೆಟಿವ್ ಆಗಿದೆ. ಇನ್ನು ಶುಕ್ರವಾರದಂದು ಸುಮಾರು 51 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 21,842ಕ್ಕೆ ತಲುಪಿದೆ.
ಇನ್ನು ಜಿಲ್ಲೆಯಲ್ಲಿ ಇಲ್ಲಿಯ ತನಕ ಒಟ್ಟು 187 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.