ಮಂಗಳೂರು,ನ.15 (DaijiworldNews/HR):ಬೈಕಿನಲ್ಲಿ ಗಾಂಜಾ ತಂದು ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಉಳ್ಳಾಲ ಬೀಚ್ ಬಳಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನನು ಮಹಮ್ಮದ್ ನಶೀಲ್ ಎಂದು ಗುರುತಿಸಲಾಗಿದೆ.
ಬಂಧಿತನಿಂದ ರೂ.1,000 ಮೌಲ್ಯದ 100 ಗ್ರಾಂ ಗಾಂಜಾ ಮತ್ತು ರೂ.20,000 ಮೌಲ್ಯದ ಬೈಕನ್ನು ವಶಪಡಿಸಿಕೊಳ್ಳಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿ ಇನ್ನೋರ್ವ ಆರೋಪಿ ರೈಝ್ ಎಂಬಾತ ತಲೆಮರೆಸಿಕೊಂಡಿದ್ದಾನೆ. ಉಳ್ಳಾಲ ಬೀಚ್ ಬಳಿ ಗಾಂಜಾ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಪಡೆದ ಉಳ್ಳಾಲ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.