ಕಾಸರಗೋಡು, ನ. 15 (DaijiworldNews/MB) : ಜಿಲ್ಲೆಯಲ್ಲಿ ಕೊರೊನಾ ಸೋಂಕು ಇಳಿಮುಖವಾಗಿದ್ದು, ರವಿವಾರ 62 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ.

118 ಮಂದಿ ಗುಣಮುಖರಾಗಿದ್ದಾರೆ. 59 ಮಂದಿಗೆ ಸಂಪರ್ಕದಿಂದ ಸೋಂಕು ಪತ್ತೆಯಾಗಿದೆ. ವಿದೇಶದಿಂದ ಬಂದ ಇಬ್ಬರು, ಹೊರರಾಜ್ಯದಿಂದ ಬಂದ ಓರ್ವನಿಗೆ ಸೋಂಕು ತಗುಲಿದೆ.
ಜಿಲ್ಲೆಯಲ್ಲಿ ಈವರೆಗೆ 20,402 ಮಂದಿಗೆ ಸೋಂಕು ದೃಢಪಟ್ಟಿದ್ದು, 1360 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.