ಮಂಗಳೂರು, ನ. 15 (DaijiworldNews/SM): ನವಂಬರ್ 17ರಿಂದ ಪದವಿ ಕಾಲೇಜುಗಳು ಪ್ರಾರಂಭವಾಗಲಿದ್ದು ಕಾಲೇಜಿಗೆ ಹಾಜರಾಗುವ ಪ್ರತಿಯೊಬ್ಬ ವಿದ್ಯಾರ್ಥಿಗಳು ಕಡ್ಡಾಯವಾಗಿ ಕೋವಿಡ್ ಟೆಸ್ಟನ್ನು ಮಾಡಿಸಿಕೊಂಡು ಪ್ರಮಾಣ ಪತ್ರದೊಂದಿಗೆ ಹಾಜರಾಗಬೇಕು ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ನೀಡಿದ್ದಾರೆ.

ವಿದ್ಯಾರ್ಥಿಗಳು ಕೋವಿಡ್ ಟೆಸ್ಟನ್ನು ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ, ತಾಲೂಕು ಆರೋಗ್ಯ ಕೇಂದ್ರಗಳಲ್ಲಿ ಮಾಡಿಸಿಕೊಳ್ಳಬಹುದಾಗಿದೆ. ಈಗಾಗಲೇ ಕೋವಿಡ್ ಟೆಸ್ಟ್ ಮ್ಯಾಪಿಂಗ್ ಗೆ ಕಾಲೇಜುಗಳು ಲಿಂಕ್ ಮಾಡಲಾಗಿದೆ. ಕೋವಿಡ್ ಟೆಸ್ಟ್ ಪ್ರಮಾಣಪತ್ರ ಹೊಂದದೇ ಇರುವ ವಿದ್ಯಾರ್ಥಿಗಳಿಗೆ ತರಗತಿಗಳಿಗೆ ಪ್ರವೇಶವಿರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಕೋವಿಡ್ ಪರೀಕ್ಷೆ ನಡೆಸುವುದು ಅನಿವಾರ್ಯವಾಗಿದೆ. ಕೋವಿಡ್ ನೆಗೆಟಿವ್ ಪ್ರಮಾಣ ಪತ್ರದೊಂದಿದೆ ತರಗತಿಗಳಿಗೆ ಹಾಜರಾಗಬೇಕಾಗಿದೆ. ಅದರೊಂದಿಗೆ ಪೋಷಕರ ಅನುಮತಿ ಪತ್ರವೂ ಕೂಡ ಬೇಕಾಗಿದೆ.