ಕಡಬ, ನ. 15 (DaijiworldNews/SM): ಬಾಣಂತಿಯೋರ್ವರು ತೀವ್ರ ರಕ್ತಸ್ರಾವಕ್ಕೊಳಗಾಗಿ ಮೃತಪಟ್ಟ ದಾರುಣ ಘಟನೆ ನವಂಬರ್ 15ರ ರವಿವಾರದಂದು ಕಡಬದಲ್ಲಿ ನಡೆದಿದೆ. ಮೃತರನ್ನು ಕೊಂಬಾರು ಗ್ರಾಮದ ಮಣಿಬಾಂಡ ಸಮೀಪದ ಕೆರೊಂದೋಡಿ ನಿವಾಸಿ ಬಾಲಕೃಷ್ಣ ಎಂಬವರ ಪತ್ನಿ ಸುನೀತಾ(35) ಎಂದು ಗುರುತಿಸಲಾಗಿದೆ.

ಗರ್ಭಿಣಿಯಾಗಿದ್ದ ಸುನಿತಾರಿಗೆ ಭಾನುವಾರದಂದು ಮನೆಯಲ್ಲೇ ಹೆರಿಗೆಯಾಗಿತ್ತು. ಬಳಿಕ ತೀವ್ರವಾಗಿ ರಕ್ತಸ್ರಾವಕ್ಕೊಳಗಾಗಿದ್ದಾರೆ, ತಕ್ಷಣವೇ ಆಂಬ್ಯುಲೆನ್ಸ್ ಮೂಲಕ ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ. ಅದಾಗಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಮಗು ಆರೋಗ್ಯವಾಗಿದ್ದು, ಪುತ್ತೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.