ಕಾಸರಗೋಡು,ನ 17. (DaijiworldNews/HR): ಜುವೆಲ್ಲರಿ ಠೇವಣಿ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಾಂಗ ಬಂಧನದಲ್ಲಿರುವ ಮಂಜೇಶ್ವರ ಶಾಸಕ ಎಂ. ಸಿ ಕಮರುದ್ದೀನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ರಕ್ತದೊತ್ತಡ ಹಿನ್ನಲೆಯಲ್ಲಿ ಕಾಞ೦ಗಾಡ್ ಜಿಲ್ಲಾ ಜೈಲಿನಿಂದ ಕಾಸರಗೋಡು ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಧುಮೇಹ ಪ್ರಮಾಣ ಹೆಚ್ಚಾಗಿದ್ದು, ಅಗತ್ಯ ಬಿದ್ದಲ್ಲಿ ಕಣ್ಣೂರು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕೊಂಡೊಯ್ಯಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.