ಮಂಗಳೂರು, ನ. 17 (DaijiworldNews/SM): ದ.ಕ. ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದ್ದು, ಮಂಗಳವಾರದಂದು 30 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ನಡುವೆ ಮಂಗಳವಾರದಂದು 91 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು ಗುಣಮುಖರಾದವರ ಸಂಖ್ಯೆ ಉತ್ತಮವಾಗಿದ್ದು, 29962ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 681 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಗಳವಾರದಂದು ಇಬ್ಬರು ಸೋಂಕಿಗೆ ಬಲಿಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು ಕೊರೋನಾ ಸಾವಿನ ಸಂಖ್ಯೆ 696ಕ್ಕೆ ಏರಿಕೆಯಾಗಿದೆ.
ಇನ್ನು ದ.ಕ. ಜಿಲ್ಲೆಯಲ್ಲಿ ಇಲ್ಲಿಯ ತನಕ ಒಟ್ಟು 304173 ಮಂದಿ ಪರೀಕ್ಷೆಗೊಳಪಟ್ಟಿದ್ದಾರೆ. ಈ ಪೈಕಿ 272834 ಮಂದಿಯ ವರದಿ ನೆಗೆಟಿವ್ ಆಗಿದ್ದು, ಜಿಲ್ಲೆಯಲ್ಲಿ ಇಲ್ಲಿಯ ತನಕ ಪತ್ತೆಯಾದ ಒಟ್ಟು ಪಾಸಿಟಿವ್ ಪ್ರಕರಣಗಳ ಸಂಖ್ಯೆ 31339ಕ್ಕೆ ತಲುಪಿದೆ.