ಕಾಸರಗೋಡು, ನ.18 (DaijiworldNews/PY): "ಸ್ಥಳೀಯಾಡಳಿತ ಸಂಸ್ಥೆ ಚುನಾವಣೆಯ ಪ್ರಚಾರ ನಡೆಸುವವರು ಕೊರೊನಾ ತಪಾಸಣೆ ನಡೆಸಬೇಕು. ಕೊರೊನಾ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಮತಯಾಚನೆಗೆ ತೆರಳಬೇಕು" ಎಂದು ಜಿಲ್ಲಾಧಿಕಾರಿ ಡಾ. ಡಿ. ಸಜಿತ್ ಬಾಬು ಮನವಿ ಮಾಡಿದ್ದಾರೆ.

"ಮತಯಾಚನೆ, ಪ್ರಚಾರಕ್ಕೆ ತೆರಳುವ ಅಭ್ಯರ್ಥಿಗಳು, ಕಾರ್ಯಕರ್ತರು ಕಡ್ಡಾಯವಾಗಿ ಆಂಟಿಜನ್ ಟೆಸ್ಟ್ ನಡೆಸಬೇಕು" ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಚುನಾವಣಾ ಪ್ರಚಾರಕ್ಕೆ ಪ್ಲಾಸ್ಟಿಕ್ ಉತ್ಪನ್ನಗಳನ್ನು ನಿಷೇಧಿಸಲಾಗಿದ್ದು, ಪರಿಸರ ಸ್ನೇಹಿ ಸಾಮಗ್ರಿಗಳನ್ನು ಮಾತ್ರ ಪ್ರಚಾರಕ್ಕೆ ಬಳಸಬೇಕು. ರಾಜ್ಯ ಚುನಾವಣಾ ಆಯೋಗದ ಆದೇಶದಂತೆ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.