ಕಾಸರಗೋಡು, ನ.18 (DaijiworldNews/PY): ಅರಬ್ಬಿ ಸಮುದ್ರದಲ್ಲಿ ಮುಂದಿನ 24 ಗಂಟೆಯೊಳಗೆ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಯಿದ್ದು, ಮೀನುಗಾರರು ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಸಾಂದರ್ಭಿಕ ಚಿತ್ರ
ಮುಂದಿನ ಆದೇಶ ತನಕ ಮೀನುಗಾರಿಕೆ ನಿಷೇಧಿಸಲಾಗಿದೆ. ಈಗ ಮೀನುಗಾರಿಕೆಗೆ ಆಳ ಸಮುದ್ರಕ್ಕೆ ತೆರಳಿದವರು ಕೂಡಲೇ ತೀರಕ್ಕೆಆಗಮಿಸಬೇಕು" ಎಂದು ರಾಜ್ಯ ವಿಪತ್ತು ನಿವಾರಣಾ ಪ್ರಾಧಿಕಾರ ತಿಳಿಸಿದೆ.
"ವಾಯುಭಾರ ಕುಸಿತದ ಹಿನ್ನಲೆಯಲ್ಲಿ ದಕ್ಷಿಣ ಕೇರಳ ಹಾಗೂ ಇತರ ಜಿಲ್ಲೆಗಳಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ" ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.