ಮಂಗಳೂರು, ನ.18 (DaijiworldNews/PY): "ಸಾರ್ವಜನಿಕರ ಬೇಡಿಕೆಗೆ ಅನುಗುಣವಾಗಿ ಕೆಎಸ್ಆರ್ಟಿಸಿ ಮಂಗಳೂರು ವಿಭಾಗದಿಂದ ನ.22ರಿಂದ ಎರ್ನಾಕುಲಂ, ಕೊಯಮತ್ತೂರಿಗೆ ವೋಲ್ವೋ ಬಸ್ ಹಾಗೂ ನ.20ರಿಂದ ಬೆಂಗಳೂರಿಗೆ ರಾಜಹಂಸ ಮತ್ತು ಕ್ಲಬ್ ಕ್ಲಾಸ್ ಸಾರಿಗೆ ಸೌಲಭ್ಯವನ್ನು ಆರಂಭಿಸಲಾಗುವುದು" ಎಂದು ಕೆಎಸ್ಆರ್ಟಿಸಿ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ಹೇಳಿದ್ದಾರೆ.

ಸಾಂದರ್ಭಿಕ ಚಿತ್ರ
"ನಿಗಮದ ವಾಹನಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರ ಅನುಕೂಲ ಹಾಗೂ ಆರೋಗ್ಯದ ಹಿತದೃಷ್ಟಿಯಿಂದ ಎಸ್ಒಪಿಯಲ್ಲಿನ ನಿರ್ದೇಶನಗಳಂತೆ ಪ್ರಯಾಣಿಸಲು ಸುವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಸಾರಿಗೆಗಳಿಗೆ ಆನ್ಲೈನ್ ಮುಂಗಡ ಟಿಕೇಟು ಬುಕ್ಕಿಂಗ್ ಮಾಡುವ ಪ್ರಯಾಣಿಕರು ಹತ್ತಿರದ ರಿಸರ್ವೇಶನ್ ಕೌಂಟರ್ ಅನ್ನು ಸಂಪರ್ಕಿಸಬಹುದಾಗಿದೆ" ಎಂದು ಕೆಎಸ್ಆರ್ಟಿಸಿ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.