ಬೆಂಗಳೂರು, ಜೂ06 : ಜೆಡಿಎಸ್- ಕಾಂಗ್ರೆಸ್ ಸಮ್ಮಿಶ್ರ ಸರಕಾರದ ನೂತನಸಂಪುಟ ಸಚಿವರ ಪ್ರಮಾಣವಚನ ಕಾರ್ಯಕ್ರಮ ರಾಜಭವನದಲ್ಲಿ ಮಧ್ಯಾಹ್ನ 2.12ಕ್ಕೆ ನಡೆಯಲಿದೆ. ಇವರಿಗೆ ರಾಜ್ಯಪಾಲ ವಜೂಭಾಯಿ ವಲಾ ಸಚಿವರಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪದಗ್ರಹಣ ಕಾರ್ಯಕ್ರಮಕ್ಕಾಗಿ ಎರಡು ಗಂಟೆ ಮುನ್ನ ರಾಜಭವನ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದ್ದು, ವಿಶೇಷ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ರಾಜಕೀಯ ಕಾರಣಗಳಿಗಾಗಿ ಕೆಲವುಸ್ಥಾನಗಳನ್ನು ಭರ್ತಿ ಮಾಡುತ್ತಿಲ್ಲ ಎಂದು ಎಚ್.ಡಿ ಕುಮಾರಸ್ವಾಮಿ ಈಗಾಗಲೇ ಘೋಷಣೆ ಮಾಡಿರುವ ಕಾರಣ ಪೂರ್ಣ ಪ್ರಮಾಣದಲ್ಲಿ ಸಂಪುಟ ರಚನೆಯಾಗುತ್ತಿಲ್ಲ. ಜೆಡಿಎಸ್ ಮೂರು ಹಾಗೂ ಕಾಂಗ್ರೆಸ್ 7 ಸ್ಥಾನಗಳನ್ನು ಬಾಕಿ ಉಳಿಸಿಕೊಳ್ಳಲಾಗಿದೆ. ಮುಖ್ಯಮಂತ್ರಿ ಸಹಿತ ಸಚಿವ ಸಂಪುಟದಲ್ಲಿ ಒಟ್ಟು 34 ಮಂದಿಗೆ ಅವಕಾಶವಿದ್ದು, ಈ ಪೈಕಿ ಕಾಂಗ್ರೆಸ್ 22 ಮತ್ತು ಜೆಡಿಎಸ್ 12 ಸ್ಥಾನ ಎಂದು ಈಗಾಗಲೇ ನಿರ್ಧಾರವಾಗಿದೆ.
ಸಚಿವರ ಪದಗ್ರಹಣ ಕಾರ್ಯಕ್ರಮಕ್ಕಾಗ ವಿಧಾನಸೌಧ, ರಾಜಭವನ ಸುತ್ತ ನಿಷೇಧಾಜ್ಞೆ ಕೂಡ ಜಾರಿಗೊಳಿಸಲಾಗಿದೆ. ರಾಜಭವನದ ಒಳಗೆ ಕೂಡ 1500 ಮಂದಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ವಿಐಪಿ, ವಿವಿಐಪಿ, ಸಚಿವರಾಗುವ ಶಾಸಕರ ಕುಟುಂಬದ ಆಯ್ದ ಸದಸ್ಯರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.