ಉಡುಪಿ, ನ. 20 (DaijiworldNews/SM): ಅಂಗಡಿಯೊಂದರ ಮುಂಭಾಗದಲ್ಲಿ ವ್ಯಕ್ತಿಯೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಶಿರ್ವ ಪೇಟೆಯಲ್ಲಿ ನಡೆದಿದೆ. ಮಟ್ಟಾರ್ ನಿವಾಸಿ ಅಕ್ಷತ್ ಪೂಜಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಶಿರ್ವ ಪೇಟೆಯ ಬಸ್ ನಿಲ್ದಾಣದ ಬಳಿ ಇರುವ ಗೂಡಂಗಡಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಇನ್ನು ಆತ್ಮಹತ್ಯೆ ಮಾಡಿಕೊಂಡ ಅಕ್ಷತ್ ಪೂಜಾರಿ ವಿಪರೀತ ಕುಡಿತದ ಚಟ ಹೊಂದಿದ್ದ ಎಂದು ತಿಳಿದುಬಂದಿದೆ. ವಿಪರೀತ ಕುಡಿತದಿಂದಾಗಿ ಜೀವನದಲ್ಲಿ ಜಿಗುಪ್ಸೆ ಹೊಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುನ್ನಡೆಸಲಾಗುತ್ತಿದೆ.