ಮಂಗಳೂರು, ನ. 20 (DaijiworldNews/SM): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ 36 ಹೊಸ ಕೊರೊನಾ ವೈರಸ್ ಪ್ರಕರಣಗಳು ವರದಿಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 31,474ಕ್ಕೆ ಏರಿಕೆಯಾಗಿವೆ. ಈ ಪೈಕಿ 631 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.

ಜಿಲ್ಲೆಯಲ್ಲಿ ಇಲ್ಲಿಯ ತನಕ ಒಟ್ಟು 3,22,899 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಅದರಲ್ಲಿ 2,91,425 ಮಂದಿಯ ವರದಿ ನೆಗೆಟಿವ್ ಆಗಿದೆ. ಶುಕ್ರವಾರ 69 ಜನರು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಒಟ್ಟು 30,142 ಮಂದಿ ಗುಣಮುಖರಾದಂತಾಗಿದೆ.
ಇದುವರೆಗೆ ಜಿಲ್ಲೆಯಲ್ಲಿ ಒಟ್ಟು 701 ಸಾವುಗಳು ಸಂಭವಿಸಿವೆ.
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಶುಕ್ರವಾರದಂದು ಜಿಲ್ಲೆಯಲ್ಲಿ 20 ಹೊಸ ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಕೊರೋನಾ ವೈರಸ್ ಪ್ರಕರಣಗಳ ಒಟ್ಟು ಸಂಖ್ಯೆ 22,470 ಕ್ಕೆ ಏರಿಕೆಯಾಗಿದೆ. ಈ ಪೈಕಿ 211 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ. ಇಲ್ಲಿಯವರೆಗೆ 2,21,371 ಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 1,98,901 ಮಂದಿಯ ವರದಿ ನೆಗೆಟಿವ್ ಆಗಿದೆ.
ಶುಕ್ರವಾರ 15 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು 22,073 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಂತಾಗಿದೆ. ಇನ್ನು ಜಿಲ್ಲೆಯಲ್ಲಿ ಈವರೆಗೆ ಒಟ್ಟು 187 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.