ಕಾಸರಗೋಡು, ನ.21 (DaijiworldNews/HR): ಜಿಲ್ಲೆಯಲ್ಲಿ ಶನಿವಾರ 104 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

104 ಮಂದಿಯಲ್ಲಿ 96 ಮಂದಿಗೆ ಸಂಪರ್ಕದಿಂದ ಸೋಂಕು ತಗಲಿದ್ದು, 168 ಮಂದಿ ಗುಣಮುಖರಾಗಿದ್ದಾರೆ.
ಇನ್ನು ಐವರು ಆರೋಗ್ಯ ಕಾರ್ಯಕರ್ತರಿಗೆ ಸೋಂಕು ಪತ್ತೆಯಾಗಿದ್ದು, ಈಗ 1073 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.