ಬೆಂಗಳೂರು, ಜೂ 06: ಕಾಂಗ್ರೆಸ್ ಪಕ್ಷದ ವಿಧಾನ ಪರಿಷತ್ ಸದಸ್ಯೆಯಾಗಿರುವ ನಟಿ ಜಯಮಾಲಾಗೆ ಅದೃಷ್ಟ ಒಲಿದಿದೆ. ಅವರಿಗೆ ಮೊತ್ತ ಮೊದಲ ಬಾರಿಗೆ ಮಂತ್ರಿ ಸ್ಥಾನ ಒಲಿದಿದ್ದು, , ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ
ಅವರ ಸಂಪುಟ ದರ್ಜೆಯ ಸಚಿವರಾಗಿ ನಟಿ ಜಯಮಾಲಾ ಸೇರ್ಪಡೆ ಆಗಿದ್ದಾರೆ.
ಕಳೆದ ನಾಲ್ಕು ವರ್ಷಗಳಿಂದ ವಿಧಾನ ಪರಿಷತ್ ಸದಸ್ಯೆ ಆಗಿ ಉತ್ತಮವಾಗಿ ಕಾರ್ಯ ನಿರ್ವಹಿಸಿರುವ ರೀತಿಯನ್ನು ಪರಿಗಣಿಸಿ ಕಾಂಗ್ರೆಸ್ ಪಕ್ಷದ ಮುಖಂಡರು ನಟಿ ಜಯಮಾಲಾ ಅವರಿಗೆ ಸಚಿವ ಸ್ಥಾನ ನೀಡಲು ನಿರ್ಧರಿಸಿದ್ದಾರೆ.
ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರಾದ ಜಯಮಾಲಾ ಬೆಳೆದಿದ್ದು ಚಿಕ್ಕಮಗಳೂರು ಜಿಲ್ಲೆಯಲ್ಲಿ. ಗೀತಪ್ರೀಯ ನಿರ್ದೇಶನದ "ಕಾಸ್ ದಾಯೆ ಕಂಡನೆ' ತುಳು ಚಿತ್ರದ ಮೂಲಕ ಸಿನಿಮಾ ಜಗತ್ತು ಪ್ರವೇಶಿಸಿದ ಜಯಮಾಲಾ ನಟಿಯಾಗಿ, ನಿರ್ಮಾಪಕಿಯಾಗಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ
ಇದೀಗ ಮಂತ್ರಿ ಪದವಿ ಪಡೆದಿರುವ , ಇವರು ಖಾತೆ ಯಾವುದೇ ಕೊಟ್ಟರೂ, ಅದಕ್ಕೆ ನ್ಯಾಯ ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಅದರೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನೀಡಿದರೆ ಉತ್ತಮವಾಗಿ ಕೆಲಸ ಮಾಡಬಹುದು ' ಎನ್ನುತ್ತಾರೆ ನಟಿ ಜಯಮಾಲಾ.