ಮಂಗಳೂರು, ನ. 22 (DaijiworldNews/SM): ದ.ಕ. ಜಿಲ್ಲೆಯಲ್ಲಿ ರವಿವಾರದಂದು 46 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಇನ್ನು ಉಡುಪಿ ಜಿಲ್ಲೆಯಲ್ಲಿ 23 ಹೊಸ ಪ್ರಕರಣಗಳು ದೃಢಪಟ್ಟಿವೆ.

ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಬುಲೆಟಿನ್ ಪ್ರಕಾರ, ಈವರೆಗೆ ಒಟ್ಟು 3,34,986 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಈ ಪೈಕಿ 3,03,420 ಮಾದರಿಗಳು ನಕಾರಾತ್ಮಕವಾಗಿವೆ. ಜಿಲ್ಲೆಯಲ್ಲಿ ಒಟ್ಟು 31,566 ಮಂದಿಯಲ್ಲಿ ಕೊರೋನಾ ದೃಢಪಟ್ಟಿದೆ. ಈ ಪೈಕಿ ಕೇವಲ 577 ಪ್ರಕರಣಗಳು ಮಾತ್ರ ಸಕ್ರಿಯವಾಗಿವೆ.
ಆಸ್ಪತ್ರೆಗಳಿಂದ ಭಾನುವಾರ 51 ಮಂದಿ ಬಿಡುಗಡೆಗೊಂಡಿದ್ದು, ಒಟ್ಟು ಚೇತರಿಕೆಯ ಸಂಖ್ಯೆ 30,285 ಕ್ಕೆ ತಲುಪಿಸಲಾಗಿದೆ. ದಕ್ಷಿಣ ಕನ್ನಡದಲ್ಲಿ ಈವರೆಗೆ ಒಟ್ಟು 704 ಸಾವುಗಳು ಸಂಭವಿಸಿವೆ.
ಉಡುಪಿಯ ರವಿವಾರದ ಕೊರೋನಾ ವರದಿ:
ಜಿಲ್ಲಾ ಆರೋಗ್ಯ ಬುಲೆಟಿನ್ ಪ್ರಕಾರ, ಇದುವರೆಗೆ 2,26,004 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 2,03,492 ಮಂದಿಯ ವರದಿ ನಕಾರಾತ್ಮಕವಾಗಿವೆ. ರವಿವಾರ ಒಟ್ಟು 23 ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 22,512 ಕ್ಕೆ ತಲುಪಿದ್ದು, ಈ ಪೈಕಿ 199 ಪ್ರಕರಣಗಳು ಮಾತ್ರ ಪ್ರಸ್ತುತ ಸಕ್ರಿಯವಾಗಿವೆ.
ರವಿವಾರ 19 ಮಂದಿ ಗುಣಮುಖರಾಗಿದ್ದು, ಒಟ್ಟು 22,127 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.