ಉಡುಪಿ, ನ. 23 (DaijiworldNews/SM): ಕರ್ನಾಟಕ ರಾಜ್ಯ ಹಿಂದುಲಿದ ವರ್ಗಗಳ ಆಯೋಗದ ಅಧ್ಯಕ್ಷ ರಾಗಿ ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ ಆಯ್ಕೆಗೊಂಡಿದ್ದಾರೆ. ಈ ಬಗ್ಗೆ ರಾಜ್ಯ ಸರಕಾರ ಮಹತ್ವದ ಆದೇಶ ಹೊರಡಿಸಿದೆ.

ಜಯಪ್ರಕಾಶ್ ಹೆಗ್ಡೆ, ಈ ಹಿಂದೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾಗಿ ಕಾರ್ಯ ನಿರ್ವಹಿಸಿದ್ದರು. ಅಲ್ಲದೆ, ಈ ಹಿಂದೆ ಮೂರು ಬಾರಿ ಸಚಿವರಾಗಿ ಸೇವೆ ಸಲ್ಲಿಸಿದ ಅನುಭವ ಅವರಿಗಿದೆ. ಇನ್ನು ಕೆಲವು ವರ್ಷಗಳ ಹಿಂದೆ ಜೆ.ಪಿ. ಹೆಗ್ಡೆ ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಬಿಜೆಪಿಗೆ ಸೇರ್ಪಡೆಗೊಂಡ ಇದೀಗ ಪಕ್ಷ ಅವರಿಗೆ ಮಹತ್ವದ ಜವಾಬ್ದಾರಿ ನೀಡಿದೆ.