ಮೂಡುಬಿದಿರೆ, ನ. 24 (DaijiworldNews/HR): ಪಾಲಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡಂದಲೆ ನದಿಯಲ್ಲಿ ಮುಳುಗಿ ನಾಲ್ವರು ಮೃತಪಟ್ಟಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ.




ಮೃತಪಟ್ಟವರನ್ನು ವಾಮಂಜೂರು ಮೂಡುಶೆಡ್ಡೆ ನಿಖಿಲ್ (18), ಹಾಗೂ ಅರ್ಶಿತಾ( 20), ವೇಣೂರಿನ ಸುಬಾಸ್(19), ಬಜ್ಪೆ ಪೆರಾರದ ರವಿ (30)ಎಂದು ಗುರುತಿಸಲಾಗಿದೆ.
ಕಡಂದಲೆ ಶ್ರೀಧರ ಆಚಾರ್ಯ ಅವರ ಮನೆಗೆ ಮದುವೆ ಸಮಾರಂಭಕ್ಕೆ ಬಂದಿದ್ದ ಮೂವರು ಯುವಕರು ಹಾಗೂ ಯುವತಿ ಮೃತಪಟ್ಟವರು.
ಶಾಂಭವಿ ನದಿಯ ತುಲೆಮುಗೇರ್ ಎಂಬಲ್ಲಿ ನದಿಯಲ್ಲಿ ಈಜಲು ಹೋದಾಗ ಈ ಘಟನೆ ನಡೆದಿದೆ.