ಮೂಡುಬಿದಿರೆ, ನ. 24 (DaijiworldNews/SM): ಇಲ್ಲಿನ ಕಡಂದಲೆ ತುಲೆಮುಗೇರ್ ನಲ್ಲಿ ವಿದ್ಯಾರ್ಥಿಗಳು ಸೇರಿದಂತೆ ನಾಲ್ವರು ನೀರುಪಾಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ಮೃತದೇಹ ಪತ್ತೆಯಾಗಿದೆ.


ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಹರ್ಷಿತಾ ಹಾಗೂ ಡಿಪ್ಲೊಮಾ ವಿದ್ಯಾರ್ಥಿ ವೇಣೂರಿನ ಸುಭಾಸ್ ಅಚಾರ್ಯ ಅವರ ಮೃತದೇಹವನ್ನು ಸಂಜೆ ವೇಳೆ ನದಿಯಿಂದ ಮೇಲಕ್ಕೆತ್ತಲಾಗಿದೆ. ಇನ್ನು ನಿಖಿಲ್ ಹಾಗೂ ರವಿ ಎಂಬ ಇಬ್ಬರ ಪತ್ತೆಗಾಗಿ ಶೋಧ ಕಾರ್ಯ ಮುಂದುವರೆಸಲಾಗಿದೆ.
ಇನ್ನು ಕಡಂದಲೆ ಶ್ರೀಧರ ಆಚಾರ್ಯ ಅವರ ಮನೆಗೆ ಮದುವೆ ಸಮಾರಂಭಕ್ಕೆ ಬಂದಿದ್ದರು. ಈ ಸಂದರ್ಭದಲ್ಲಿ ಶಾಂಭವಿ ನದಿಯ ತುಲೆಮುಗೇರ್ ಎಂಬಲ್ಲಿ ನದಿಯಲ್ಲಿ ಈಜಲು ಹೋದಾಗ ಈ ದುರ್ಘಟನೆ ನಡೆದಿದೆ. ಮಂಗಳವಾರ ರಾತ್ರಿ ವೇಳೆ ಮೃತದೇಹ ಶೋಧ ಕಾರ್ಯಾಚರಣೆಗೆ ಅಡಚನೆಯಾಗಿದ್ದು, ಬುಧವಾರದಂದು ಶೋಧಕಾರ್ಯ ಮುಂದುವರೆಯುವ ಸಾಧ್ಯತೆ ಇದೆ.
ಘಟನೆಗೆ ಸಂತಾಪ ವ್ಯಕ್ತಪಡಿಸಿದ ಶಾಸಕ ಉಮಾನಾಥ್ ಕೊಟ್ಯಾನ್:
ಇನ್ನು ಮೂಡುಬಿದಿರೆ ಕ್ಷೇತ್ರದ ಶಾಸಕ ಉಮನಾಥ್ ಕೋಟ್ಯಾನ್ ಬೆಂಗಳೂರಿನಲ್ಲಿದ್ದು, ಕಡಂದಲೆಯಲ್ಲಿ ನಡೆದ ದುರ್ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ದೈಜಿವರ್ಲ್ಡ್ ಜೊತೆಗೆ ಮಾತನಾಡಿದ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಹಾಗೂ ಕುಟುಂಬದ ಸದಸ್ಯರಿಗೆ ದುಃಖ ಸಹಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಅವರು ಪ್ರಾರ್ಥಿಸಿದ್ದಾರೆ. ಸದ್ಯ ಶಾಸಕರು ಸಭೆಯ ನಿಮಿತ್ತ ಬೆಂಗಳೂರಿಗೆ ತೆರಳಿದ್ದೇನೆ. ಹಾಗಾಗಿ ಘಟನಾ ಸ್ಥಳಕ್ಕೆ ಭೇಟಿ ನೀಡಲು ಸಾಧ್ಯವಾಗಲಿಲ್ಲ. ಘಟನೆ ಬಗ್ಗೆ ದ.ಕ. ಜಿಲ್ಲಾಧಿಕಾರಿ ಜೊತೆ ಮಾತನಾಡಿದ್ದೇನೆ. ಬೆಂಗಳೂರಿನಿಂದ ಬಂದ ಬಳಿಕ ಮೃತರ ಮನೆಗೆ ಭೇಟಿ ನೀಡುವುದಾಗಿ ತಿಳಿಸಿದ್ದಾರೆ.