ಉಳ್ಳಾಲ, ನ. 28 (DaijiworldNews/SM): ಸ್ಕೂಟರ್ ಗೆ ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ತೊಕ್ಕೊಟ್ಟು ನಾಗನಕಟ್ಟೆ ಬಳಿ ಸಂಭವಿಸಿದೆ.

ಸ್ಕೂಟರ್ ಸವಾರ ಇಕ್ಬಾಲ್ ಅಹ್ಮದ್ ಗಂಭೀರ ಸ್ಥಿತಿಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ತೊಕ್ಕೊಟ್ಟಿನಿಂದ ಸರ್ವೀಸ್ ರಸ್ತೆ ಮೂಲಕ ಸ್ಕೂಟರ್ ನಲ್ಲಿ ನಾಗನಕಟ್ಟೆಗೆ ಬರುತ್ತಿದ್ದಾಗ ಓವರ್ ಬ್ರಿಡ್ಜ್ ಕಡೆಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ.
ಸ್ಕೂಟರ್ ಡಾಮಾರು ರಸ್ತೆಯಲ್ಲಿ ಬಿದ್ದಿದ್ದು, ಇಕ್ಬಾಲ್ ಅವರಿಗೆ ಗಂಭೀರ ಗಾಯವಾಗಿದೆ. ಗಾಯಾಳುವನ್ನು ಗಂಭೀರ ಸ್ಥಿತಿಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.