ಮಂಗಳೂರು, ನ. 28 (DaijiworldNews/SM): ದಕ್ಷಿಣ ಕನ್ನಡ ಜಿಲ್ಲಾಡಳಿತದ ಆರೋಗ್ಯ ಬುಲೆಟಿನ್ ಪ್ರಕಾರ ಜಿಲ್ಲೆಯಲ್ಲಿ ಶನಿವಾರ 61 ಹೊಸ ಕರೋನಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 31,848 ಕ್ಕೆ ಏರಿಕೆಯಾಗಿವೆ. ಈ ಪೈಕಿ 599 ಮಂದಿ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲೆಯಲ್ಲಿ ಇಲ್ಲಿಯ ತನಕ ಒಟ್ಟು 3,57,855 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಅವುಗಳ ಪೈಕಿ 3,26,007 ಮಂದಿಯ ವರದಿ ನೆಗೆಟಿವ್ ಆಗಿದೆ. ಶನಿವಾರ 44 ಜನರನ್ನು ಬಿಡುಗಡೆ ಮಾಡಲಾಗಿದೆ. ಶನಿವಾರದಂದು ಒಂದು ಸೇರಿದಂತೆ ಒಟ್ಟು 711 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಇನ್ನು ಉಡುಪಿ ಜಿಲ್ಲೆಯಲ್ಲಿ ಶನಿವಾರ 29 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಜಿಲ್ಲೆಯ ಕರೋನಾ ವೈರಸ್ ಪ್ರಕರಣಗಳ ಸಂಖ್ಯೆ 22,637ಕ್ಕೆ ಏರಿಕೆಯಾಗಿದೆ. ಈ ಪೈಕಿ 187 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.
ಇಲ್ಲಿಯವರೆಗೆ 2,41,187 ಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 2,18,550 ಮಂದಿಯ ವರದಿ ನೆಗೆಟಿವ್ ಆಗಿದೆ. ಶನಿವಾರ 21 ರೋಗಿಗಳನ್ನು ಬಿಡುಗಡೆಗೊಂಡಿದ್ದಾರೆ. ಈವರೆಗೆ ಒಟ್ಟು 187 ಸಾವುಗಳು ಸಂಭವಿಸಿವೆ.